💢 ಜಿಲ್ಲೆಯಲ್ಲಿ 41,90,025 ರೂ ಮೌಲ್ಯದ ಮದ್ಯ – 8,69,950 ಮೌಲ್ಯದ ಡ್ರಗ್ಸ್ ಜಪ್ತಿ
ಮಂಗಳೂರು : 2024ರ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಮಾರ್ಚ್ 31 ರವರೆಗೆ ಜಿಲ್ಲೆಯಲ್ಲಿ 41,90,025 ರೂ. ಮೌಲ್ಯದ 12,843 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ ಹಾಗೂ 8,69,950 ರೂ. ಮೌಲ್ಯದ 15.5 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ.
ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಸೇರಿದಂತೆ ಒಟ್ಟು 239 ಎಫ್ ಐ ಆರ್ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.