Karnataka Postal Circle Recruitment 2024: ಏಪ್ರಿಲ್ 3, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಆಸಕ್ತರು ಆಫ್ಲೈನ್(Offline) ಮೂಲಕ ಅರ್ಜಿ ಹಾಕಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
Post Office Recruitment 2024: ಭಾರತೀಯ ಅಂಚೆ ಇಲಾಖೆ (India Postal Department) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕದಲ್ಲಿ 22 ಪೋಸ್ಟ್ಮ್ಯಾನ್, ಪೋಸ್ಟಲ್ ಅಸಿಸ್ಟೆಂಟ್ ಹುದ್ದೆಗಳನ್ನು ಅಂಚೆ ಇಲಾಖೆ ತುಂಬಲಿದೆ. ಆಸಕ್ತರು ಈಗಲೇ ಅರ್ಜಿ ಸಲ್ಲಿಸಬಹುದು. ಏಪ್ರಿಲ್ 3, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಆಸಕ್ತರು ಆಫ್ಲೈನ್(Offline) ಮೂಲಕ ಅರ್ಜಿ ಹಾಕಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಬೇಗನೆ ಅರ್ಜಿ ಹಾಕಿ ಪೋಸ್ಟ್ ಆಫೀಸ್ ಉದ್ಯೋಗ ಪಡೆದುಕೊಳ್ಳಿ.
ಹುದ್ದೆಯ ಮಾಹಿತಿ:
ಪೋಸ್ಟಲ್ ಅಸಿಸ್ಟೆಂಟ್- 6
ಸಾರ್ಟಿಂಗ್ ಅಸಿಸ್ಟೆಂಟ್- 3
ಪೋಸ್ಟ್ಮ್ಯಾನ್- 13
ವೇತನ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಿಲ್ಲ. ಅವರ ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ಕೊಡಲಾಗುತ್ತದೆ.
ಉದ್ಯೋಗದ ಸ್ಥಳ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 28/02/2024
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 3, 2024
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಸಹಾಯಕ ನಿರ್ದೇಶಕರು (R&E)
ಮುಖ್ಯ ಪೋಸ್ಟ್‌ಮಾಸ್ಟರ್ ಜನರಲ್ ಕಚೇರಿ
ಕರ್ನಾಟಕ ವೃತ್ತ
ಬೆಂಗಳೂರು-560001