ಉಡುಪಿ : ಉಡುಪಿ ಚಿಕ್ಕಮಂಗಳೂರು ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿಯವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಪೂರ್ವಭಾವಿಯಾಗಿ 10 ಗಂಟೆಗೆ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಲಿದೆ. ಮಾಜಿ ಕೇಂದ್ರ ಸಚಿವ ಬಸವನ ಗೌಡ ಪಾಟೀಲ್ ಯತ್ನಾಳ್ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ, ವಿ ಸುನಿಲ್ ಕುಮಾರ್ ಮತ್ತಿತರಗಣ್ಯರು ಭಾಗವಹಿಸಲಿದ್ದಾರೆ.