ಉಡುಪಿ: ಇತ್ತೀಚೆಗಷ್ಟೇ ನಡೆದ ಅಡಿಕೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಶಂಕರನಾರಾಯಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ಶಂಕರನಾರಾ ಯಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅನೇಕ ಅಡಿಕೆ ವ್ಯಾಪಾರದ ಅಂಗಡಿಗಳಿಗೆ ಕನ್ನ ಹಾಕಿ ಅಡಿಕೆ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿಗಳು ಹಾಲಾಡಿ ಮತ್ತು ಕೊದ್ರ ಬೈಲೂರು ಪರಿಸರ, ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಜಡ್ಕಲ್ ಮತ್ತು ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನೋಜಾಡಿ ಮುಂತಾದ ಪ್ರದೇಶಗಳಲ್ಲಿ ಕಳ್ಳತನ ಮಾಡಿದ್ದಾರೆಂದು ಆರೋಪಿಸಲಾಗಿದೆ.

ವಸ್ತುಗಳ ಒಟ್ಟು ಮೌಲ್ಯ 4.05 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.