ಲೋಕಸಭಾ ಚುನಾವಣೆ 2024 ರ ಚುನಾವಣಾ ಪ್ರಚಾರ ಕಾರ್ಯ ಚಟುವಟಿಕೆಗಳಲ್ಲಿ ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳ ಪರವಾಗಿ ಬಾಲ ಕಾರ್ಮಿಕರು ಅಥವಾ ಕಿಶೋರ ಕಾರ್ಮಿಕ ಮಕ್ಕಳ ಬಳಕೆಯನ್ನು ಮಾಡಬಾರದು ಇದನ್ನು ನಿಷೇಧಿಸಲಾಗಿದೆ. ತಪ್ಪಿದಲ್ಲಿ ಬಾಲ ಮತ್ತು ಕಿಶೋರ ಕಾರ್ಮಿಕ ( ನಿಷೇಧ ಮತ್ತು ನಿಯಂತ್ರಣ ) ಕಾಯ್ದೆ 1986 ತಿದ್ದುಪಡಿಯ ಕಾಯ್ದೆ 2016 ಇದರ ಅನ್ವಯ ಸಂಬಂಧ ಪಟ್ಟವರ ಮೇಲೆ ಸೂಕ್ತ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಅಧಿಕಾರಿ ಕಚೇರಿಯಿಂದ ಪ್ರಕಟಣೆ ತಿಳಿಸಲಾಗಿದೆ.