ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ನಡೆದ ಸ್ವೀಪ್ ಚಟುವಟಿಕೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪ್ರತೀಕ್ ಬಾಯಲ್ ಇವರು ಮತದಾನ ಜಾಗೃತಿಗಾಗಿ ವಾಟ್ಸ್ಯಾಪ್ ಡಿಪಿ ಬಿಡುಗಡೆಗೊಳಿಸಿದರು. ಈ ಡಿಪಿ ಯಲ್ಲಿ ಸಿ.ಇ.ಒ ಹಾಗೂ ಅಪರ ಜಿಲ್ಲಾಧಿಕಾರಿಗಳು ಕರಾವಳಿಯ ಗಂಡುಕಲೆ ಯಕ್ಷಗಾನ ವೇಷ ಧರಿಸಿ ಮತದಾನ ಜಾಗೃತಿ ಮೂಡಿಸುತ್ತಿರುವ ಫೋಟೋ ಹಾಕಲಾಗಿದ್ದು, ಇದರಲ್ಲಿ ಕಡ್ಡಾಯ ಮತದಾನ ಸಂದೇಶ ಸಾರುವ ಸಾಲುಗಳನ್ನು ಬರೆಯಲಾಗಿದೆ.
ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ರಾಧಕೃಷ್ಣ ಅಡಿಗ, ಮುಖ್ಯ ಯೋಜನಾಧಿಕಾರಿಗಳಾದ ಶ್ರೀನಿವಾಸ್ ರಾವ್, ಉಡುಪಿ ಡಯಟ್ ಪ್ರಾಂಶುಪಾಲರಾದ ಗೋವಿಂದ ಮಡಿವಾಳ, ಜಿಲ್ಲೆಯ ಎಲ್ಲಾ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು ವಿವಿಧ ಇಲಾಖೆಯ ಅಧಿಕಾರಿಯವರು ಉಪಸ್ಥಿತರಿದ್ದರು.