ಆಗುಂಬೆ : ಮರ ಬಿದ್ದು ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಘಾಟಿಯ ಮೂರನೆ ತಿರುವಿನಲ್ಲಿ ಮರ ಬುಡ ಮೇಲಾಗಿದೆ. ರಸ್ತೆಗೆ ಅಡ್ಡಲಾಗಿ ಬಿದ್ದಿದ್ದರಿಂದ ವಾಹನ ಸಂಚಾರ ಸ್ಥಗಿತಗೊಂಡಿದೆ. ವಿಷಯ ತಿಳಿದು ಪೊಲೀಸರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮರ ಬಿದ್ದ ಹಿನ್ನೆಲೆ ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.