spot_img

ಕಾರ್ಕಳ ಶ್ರೀ ವೆಂಕಟರಮಣ ದೇವಳದ ರಥೋತ್ಸವ: ವಾಹನಗಳ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

ಉಡುಪಿ: ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಮೇ 9 ರಿಂದ 14 ರ ವರೆಗೆ ರಥೋತ್ಸವ ಕಾರ್ಯಕ್ರಮಗಳು ನಡೆಯಲಿದ್ದು, ಮೇ 13 ರಂದು ಸಂಜೆ 4 ಗಂಟೆಯಿಂದ ಮೇ 14 ರ ಬೆಳಗ್ಗೆ 6 ಗಂಟೆಯವರೆಗೆ ಮೂರು ಮಾರ್ಗದಿಂದ ಸ್ಟೇಟ್ ಬ್ಯಾಂಕ್ ಜಂಕ್ಷನ್‌ವರೆಗೆ ವಾಹನ ಸಂಚಾರವನ್ನು ನಿಷೇಧಿಸಿ, ಪರ್ಯಾಯ ಮಾರ್ಗದಲ್ಲಿ ಸಂಚಾರ ವ್ಯವಸ್ಥೆ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

ಪರ್ಯಾಯ ಮಾರ್ಗದ ವಿವರ:

ಘನವಾಹನಗಳು ಬಂಗ್ಲೆಗುಡ್ಡೆ- ಹಿರಿಯಂಗಡಿ- ಪುಲ್ಕೆರಿ ಮಾರ್ಗವಾಗಿ ಸಂಚರಿಸಬೇಕು.

ಕಾರ್ಕಳದಿಂದ ಜೋಡುರಸ್ತೆ ಕಡೆಗೆ ಹಾಗೂ ಜೋಡು ರಸ್ತೆಯಿಂದ ಕಾರ್ಕಳ ಕಡೆಗೆ ಸಂಚರಿಸುವ ಬಸ್‌ಗಳು ತಾಲೂಕು ಜಂಕ್ಷನ್‌ನಿಂದ ಕಲ್ಲೊಟ್ಟೆ, ಮಾರ್ಕೆಟ್ ಮಾರ್ಗವಾಗಿ ಬಸ್ ನಿಲ್ದಾಣ ಪ್ರವೇಶಿಸಬೇಕು.

ಸ್ಟೇಟ್ ಬ್ಯಾಂಕ್ ಮೂರು ಮಾರ್ಗದಲ್ಲಿ ಸಂಚರಿಸುವ ಲಘು ವಾಹನ ಮತ್ತು ದ್ವಿಚಕ್ರ ವಾಹನಗಳು ಸ್ಟೇಟ್ ಬ್ಯಾಂಕ್ ಜಂಕ್ಷನ್‌ನಿಂದ ಗಾಂಧಿ ಮೈದಾನವಾಗಿ ಕಾಮಧೇನು ಹೋಟೆಲ್ ಜಂಕ್ಷನ್ ಮಾರ್ಗವಾಗಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಸಂಬಂಧಿತ ಸುದ್ದಿ

ಪಂಚಾಂಗ
ನಿತ್ಯ-ಭವಿಷ್ಯ
ಹವಾಮಾನ
ಬಂಗಾರದ ದರಪಟ್ಟಿ

ಸಮಾಜಿಕ

0FansLike
0FollowersFollow
0SubscribersSubscribe
- Advertisement -spot_img

ಜನಪ್ರಿಯ ಲೇಖನಗಳು