spot_img

ಇಂದಿನ ಭವಿಷ್ಯ :

ಮೇಷ ರಾಶಿ
ಸಣ್ಣಪುಟ್ಟ ಕೆಲಸ ಕಾರ್ಯಗಳಿಗೂ ಹೆಚ್ಚಿನ ಪ್ರಯತ್ನದ ಅಗತ್ಯತೆ ಇರುತ್ತದೆ. ಮನದಲ್ಲಿ ಅಳುಕಿನ ಭಾವನೆ ಇರುವ ಕಾರಣ ಕೆಲಸ ಕಾರ್ಯಗಳಲ್ಲಿ ಹಿನ್ನೆಡೆ ಉಂಟಾಗಲಿದೆ. ಮೊದಲು ನಿಮ್ಮ ಸ್ವಂತ ಸಾಮರ್ಥ್ಯವನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿರಿ. ಸಾಲದ ವಿಚಾರದಲ್ಲಿ ಆತ್ಮೀಯರೊಂದಿಗೆ ಮನಸ್ತಾಪ ಉಂಟಾಗುತ್ತದೆ. ಹಣದ ಕೊರತೆ ಕಂಡುಬರಲಿದೆ. ನೀವು ಇರುವ ಕಡೆ ಸಂತೋಷಕ್ಕೆ ಕೊರತೆ ಇರುವುದಿಲ್ಲ. ಸಂಗಾತಿಯ ಆರೋಗ್ಯದ ವಿಚಾರದಲ್ಲಿ ಮಾನಸಿಕ ಒತ್ತಡ ಇರುತ್ತದೆ. ಸ್ವತಂತ್ರವಾಗಿ ನಿರ್ವಹಿಸುವ ವ್ಯಾಪಾರ ವ್ಯವಹಾರದಿಂದ ಆರ್ಥಿಕ ಸ್ಥಿತಿಯಲ್ಲಿ ಪ್ರಗತಿ ಕಾಣುವಿರಿ.

ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 8

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಹಾಲಿನ ಬಣ್ಣ

ವೃಷಭ ರಾಶಿ
ಆತ್ಮೀಯರ ಸಹಾಯದಿಂದ ಹೊಸ ಕೆಲಸ ಕಾರ್ಯಗಳನ್ನು ಆರಂಭಿಸುವಿರಿ. ಹೊಸಬರ ಪರಿಚಯ ಜೀವನಕ್ಕೆ ಹೊಸ ರೂಪವನ್ನು ನೀಡುತ್ತದೆ. ಉದ್ಯೋಗದಲ್ಲಿ ಮಧ್ಯಮ ಗತಿಯ ಪ್ರಗತಿ ಕಂಡುಬರುತ್ತದೆ. ನಿಮಗೆ ಅನುಕೂಲ ನೀಡುವ ವಿಚಾರಗಳಿಗೆ ಪ್ರಥಮ ಆದ್ಯತೆ ನೀಡುವಿರಿ. ಹಣಕಾಸಿನ ವ್ಯವಹಾರದಲ್ಲಿ ಉತ್ತಮ ಆದಾಯ ದೊರೆಯುತ್ತದೆ. ದಾಂಪತ್ಯ ಜೀವನದ ಮನಸ್ತಾಪವು ದೂರವಾಗಲಿದೆ. ಸಂಗಾತಿಯ ಕೆಲಸ ಕಾರ್ಯಗಳು ಕೆಲವೊಮ್ಮೆ ಬೇಸರ ಹುಟ್ಟಿಸುತ್ತದೆ. ಆದರೆ ಶಾಂತಿ ಸಂಯಮದಿಂದ ವರ್ತಿಸಿ ಕುಟುಂಬವನ್ನು ಸರಿಯಾದ ಹಾದಿಯಲ್ಲಿ ನಡೆಸುವಿರಿ.
ಪರಿಹಾರ: ಸಾಧು ಸಂತರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 11

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಹೊಗೆಯ ಬಣ್ಣ

ಮಿಥುನ ರಾಶಿ
ಕೈಗೊಂಡ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ಒಳ್ಳೆಯ ಅಭ್ಯಾಸಗಳಿಂದ ಆರೋಗ್ಯದಲ್ಲಿ ಸುಧಾರಣೆ ಕಂಡುಬರುತ್ತದೆ. ಎಲ್ಲರೊಂದಿಗೆ ಸ್ನೇಹ ಪ್ರೀತಿಯಿಂದ ಬೆರೆಯುವಿರಿ. ಆರೋಗ್ಯವು ಸಹಜ ಸ್ಥಿತಿಗೆ ಮರಳುತ್ತದೆ. ಕುಟುಂಬದಲ್ಲಿ ಅನಗತ್ಯ ಖರ್ಚು ವೆಚ್ಚಗಳು ಕಂಡುಬರುತ್ತದೆ. ವಂಶದಲ್ಲಿ ವಿಶೇಷ ಸ್ಥಾನಮಾನ ದೊರೆಯುತ್ತದೆ. ಹಣಕಾಸಿನ ವಿಚಾರದಲ್ಲಿ ಸಹನೆಯಿಂದ ವರ್ತಿಸುವುದು ಒಳ್ಳೆಯದು. ಮಕ್ಕಳ ಒಡನಾಟ ಮನದಲ್ಲಿನ ನೋವನ್ನು ಮರೆಯುವಂತೆ ಮಾಡುತ್ತದೆ.

ಪರಿಹಾರ: ಬೇವಿನ ಮರಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸುವುದು.

ಅದೃಷ್ಟದ ಸಂಖ್ಯೆ: 2

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಆಕಾಶನೀಲಿ

ಕಟಕ ರಾಶಿ
ಮನದಲ್ಲಿ ನಿರ್ವಿಕಾರ ಭಾವನೆ ಇರುತ್ತದೆ. ಅಸಹಜವಾದ ಯೋಚನೆಗಳಿಂದ ದೂರವಿದ್ದು ಸಂತಸದಿಂದ ಬಾಳುವಿರಿ. ಮಕ್ಕಳ ಪ್ರೀತಿ ವಿಶ್ವಾಸ ಎಲ್ಲರ ಗಮನ ಸೆಳೆಯುತ್ತದೆ. ಆತ್ಮೀಯೊಂದಿಗೆ ಕಿರು ಪ್ರವಾಸ ಕೈಗೊಳ್ಳುವಿ. ದಿನವಿಡೀ ಬೇರೆಯವರ ಕೆಲಸ ಕಾರ್ಯಗಳಲ್ಲಿ ಸಹಕರಿಸಬೇಕಾಗುತ್ತದೆ. ಮನದಲ್ಲಿ ಯೋಜಿಸಿದ್ದ ವಿಚಾರಗಳು ನೆನೆಗುದಿಗೆ ಬೀಳುತ್ತವೆ. ಸುಲಭವಾಗಿ ಬೇರೆಯವರ ಪ್ರಭಾವಕ್ಕೆ ಮಣಿದು ತಪ್ಪು ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಸಂಗಾತಿಯ ಮನದಲ್ಲಿ ಮೂಡುವ ಯೋಚನೆಗಳು ಕಾರ್ಯರೂಪಕ್ಕೆ ಬರಲಿವೆ. ಉದ್ಯೋಗದಲ್ಲಿ ಧನಾತ್ಮಕ ಬದಲಾವಣೆಗಳು ಎದುರಾಗಲಿವೆ.

ಪರಿಹಾರ: ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 9
ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ರಕ್ತದ ಬಣ್ಣ

ಸಿಂಹ ರಾಶಿ
ಸಣ್ಣಪುಟ್ಟ ಗೆಲುವು ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಎದುರಾಗುವ ಸಮಸ್ಯೆಗಳನ್ನು ನೀಗಿಸುತ್ತ ಉದ್ಯೋಗದಲ್ಲಿ ಮುನ್ನಡೆಯುವಿರಿ. ವಿದ್ಯಾರ್ಥಿಗಳು ಉನ್ನತ ಅಧ್ಯಯನದಲ್ಲಿ ತೊಡಗುತ್ತಾರೆ. ಬಿಡುವಿನ ವೇಳೆಯಲ್ಲಿ ಕ್ರೀಡಾಚಟುವಟಿಕೆಗಳಲ್ಲಿ ತೊಡಗುತ್ತಾರೆ. ಕುಟುಂಬದಲ್ಲಿ ನಿಮ್ಮಿಂದಾಗಿ ಸಂತಸದ ವಾತಾವರಣ ನಿರ್ಮಾಣವಾಗುತ್ತದೆ. ಪ್ರತಿಯೊಂದು ವಿಚಾರಗಳನ್ನು ಕುಟುಂಬದವರೊಡನೆ ಚರ್ಚಿಸುವಿರಿ. ಜೀವನದಲ್ಲಿನ ಪ್ರಮುಖ ಘಟನೆಯೊಂದು ನಡೆಯಲಿದೆ. ನಿಮ್ಮಲ್ಲಿನ ಹಾಸ್ಯ ಪ್ರಜ್ಞೆ ಜನಮನ ಗೆಲ್ಲುತ್ತದೆ. ಎಷ್ಟೇ ಸಿರಿವಂತರಾದರು ಸರಳತೆಯಿಂದ ಬಾಳುವಿರಿ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಅಕ್ಕಿ ಬೆಳೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 12

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಎಲೆಹಸಿರು ಬಣ್ಣ

ಕನ್ಯಾ ರಾಶಿ
ಬಿಡುವಿಲ್ಲದ ಕೆಲಸದಿಂದ ಆಯಾಸವಿರುತ್ತದೆ. ಆದಾಯವನ್ನು ಹೆಚ್ಚಿಸಿಕೊಳ್ಳಲು ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಹಣಕಾಸಿನ ವಿಚಾರದಲ್ಲಿ ದುಡುಕದೆ ಮುಂದುವರೆಯಿರಿ. ಅನಗತ್ಯವಾದ ವಾದ ವಿವಾದಗಳು ಎದುರಾಗಲಿವೆ. ವಂಶದ ಆಸ್ತಿಯ ವಿಚಾರದಲ್ಲಿ ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಕಂಡುಬರಲಿವೆ. ಸಂಗಾತಿಯ ಜೊತೆಯಲ್ಲಿ ಉತ್ತಮ ಅನುಬಂಧ ಏರ್ಪಡುತ್ತದೆ. ಉದ್ಯೋಗದಲ್ಲಿ ಎದುರಾಗುವ ಅಡೆತಡೆಗಳು ನಿವಾರಣೆಯಾಗಿ ಹೊಸತನ ಮೂಡುತ್ತದೆ. ದೃಢವಾದ ನಿರ್ಧಾರವನ್ನು ತೆಗೆದುಕೊಳ್ಳಲು ವಿಫಲರಾಗುವಿರಿ. ಕುಟುಂಬದಲ್ಲಿರುವ ಮಕ್ಕಳಿಗೆ ಉಡುಗೊರೆಗಳನ್ನು ನೀಡುವಿರಿ. ವಿದೇಶಕ್ಕೆ ತೆರಳುವ ಅವಕಾಶವನ್ನು ಕಳೆದುಕೊಳ್ಳುವಿರಿ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಪೂಜಾ ದ್ರವ್ಯಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 3

ಅಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ಕೇಸರಿ

ತುಲಾ ರಾಶಿ
ಹಿರಿಯರ ವಿಚಾರದಲ್ಲಿ ಎಚ್ಚರಿಕೆ ವಹಿಸಿ. ಆತ್ಮೀಯರ ಸಲಹೆ ಸೂಚನೆಯನ್ನು ಸ್ವೀಕರಿಸಿದಲ್ಲಿ ಶುಭ ಫಲಗಳು ದೊರೆಯಲಿವೆ. ಸ್ವತಂತ್ರವಾಗಿ ಯಾವುದೇ ಕೆಲಸವನ್ನು ಮಾಡಲಿಚ್ಚಿಸುವುದಿಲ್ಲ. ಮನಸ್ಸಿಲ್ಲದೆ ಆರಂಭಿಸುವ ಕೆಲಸ ಕಾರ್ಯಗಳು ಅಪೂರ್ಣಗೊಳ್ಳುತ್ತವೆ. ಹಣಕಾಸಿನ ಉಳಿತಾಯ ಯೋಜನೆಯಲ್ಲಿ ಆಸಕ್ತಿ ಮೂಡಲಿದೆ. ತಪ್ಪು ಅಭಿಪ್ರಾಯದಿಂದ ಉದ್ಯೋಗವನ್ನು ಬದಲಿಸುವಿರಿ. ಕೆಲಸದ ಒತ್ತಡ ಹೆಚ್ಚುವ ಸಾಧ್ಯತೆ ಇದೆ. ಮಾತುಕತೆಯಿಂದ ಕುಟುಂಬದ ಬಿಕ್ಕಟ್ಟು ದೂರವಾಗುತ್ತದೆ.
ಪರಿಹಾರ: ಹಳದಿ ಬಣ್ಣದ ಬಟ್ಟೆಗಳನ್ನು ದಾನ ನೀಡಿ ದಿನದ ಕೆಲಸಗಳನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 10

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ವೃಶ್ಚಿಕ ರಾಶಿ
ಯಾವುದೇ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಹಣಕಾಸಿನ ವಿಚಾರದಲ್ಲಿ ಆತ್ಮೀಯರ ಸಲಹೆ ಸಹಕಾರ ದೊರೆಯಲಿದೆ. ಯಾವುದೇ ಪ್ರಭಾವಕ್ಕೆ ಮಣಿಯದೆ ಸ್ವಂತ ಕೆಲಸ ಕಾರ್ಯಗಳನ್ನು ಸ್ವತಂತ್ರವಾಗಿ ನಿರ್ವಹಿಸುವಿರಿ. ಕುಟುಂಬದ ಹಿರಿಯರ ಪ್ರಯತ್ನದಿಂದಾಗಿ ಪರಸ್ಪರ ಅನ್ಯೋನ್ಯತೆ ಬೆಳೆಯುತ್ತದೆ. ಸಮಯ ವ್ಯರ್ಥ ಮಾಡದೆ ಕೆಲಸ ಕಾರ್ಯಗಳಲ್ಲಿ ತೊಡಗಿದರೆ ಸುಲಭವಾಗಿ ಯಶಸ್ಸು ದೊರೆಯುತ್ತದೆ. ಉದ್ಯೋಗದಲ್ಲಿ ನಿಮ್ಮ ಮಾತಿಗೆ ಸಾಕಷ್ಟು ಗೌರವ ವ್ಯಕ್ತವಾಗುತ್ತದೆ. ಸಮಾಜದಲ್ಲಿನ ನಾಯಕತ್ವ ದೊರೆಯಲಿದೆ.

ಪರಿಹಾರ: ಗೋಸೇವೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ .

ಅದೃಷ್ಟದ ಸಂಖ್ಯೆ: 1

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಕೆಂಪು

ಧನಸ್ಸು ರಾಶಿ
ಯಾವುದೇ ಕೆಲಸವಾದರೂ ಮಾನಸಿಕವಾಗಿ ಸದೃಢಗೊಳ್ಳುವಿರಿ. ಕುಟುಂಬದ ಎಲ್ಲಾ ಕೆಲಸ ಕಾರ್ಯಗಳಲ್ಲಿ ನಿಮ್ಮ ಪಾತ್ರ ಅತಿ ಮುಖ್ಯವಾಗುತ್ತದೆ. ಆತಂಕದ ಪರಿಸ್ಥಿತಿಯಲ್ಲಿಯೂ ಧೈರ್ಯದಿಂದ ಮುನ್ನುಗ್ಗುವಿರಿ. ಉತ್ತಮ ಆದಾಯ ಇದ್ದರೂ ಹಣವನ್ನು ಉಳಿಸಲು ವಿಫಲರಾಗುವಿರಿ. ಪ್ರವಾಸ ಮಾಡುವ ವೇಳೆ ಹಣ ಅಥವಾ ನಿಮ್ಮ ನೆಚ್ಚಿನ ವಸ್ತುವನ್ನು ಕಳೆದು ಹೋಗಬಹುದು, ಎಚ್ಚರಿಕೆ ಇರಲಿ. ಕುಟುಂಬದ ಮತ್ತು ಬಂಧು ಬಳಗದವರ ಸಭೆ ಸಮಾರಂಭಗಳಲ್ಲಿ ಪ್ರಮುಖ ಪಾತ್ರ ವಹಿಸುವಿರಿ.

ಪರಿಹಾರ: ಮನೆಯ ದೇವರ ಗುಡಿಯಲ್ಲಿ ತುಪ್ಪದ ದೀಪವನ್ನು ಹಚ್ಚಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 4

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಕಿತ್ತಳೆ

ಮಕರ ರಾಶಿ
ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ಕುಟುಂಬದ ಸಲುವಾಗಿ ಹೆಚ್ಚಿನ ಖರ್ಚು ವೆಚ್ಚಗಳು ಇರುತ್ತವೆ. ಆರಂಭಿಸಿದ ಕಾರ್ಯಗಳಲ್ಲಿ ಹಿನ್ನಡೆ ಕಂಡು ಬಂದರೆ ಸಿಡುಕುತನದಿಂದ ವರ್ತಿಸುವಿರಿ. ಯಾವುದೇ ಅನುಕೂಲವಿಲ್ಲದ ವ್ಯವಹಾರಗಳಿಂದ ದೂರ ಉಳಿಯುವಿರಿ. ಅಭಿವೃದ್ಧಿ ಪಾಥದಲ್ಲಿ ಸಾಗುವಿರಿ. ಅವಿವಾಹಿತರಿಗೆ ಸಂಬಂಧ ಅಥವಾ ಪರಿಚಯದಲ್ಲಿ ವಿವಾಹ ನಿಶ್ಚಯವಾಗುತ್ತದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ವಿನೂತನ ಸಾಧನೆ ಮಾಡಲಿದ್ದಾರೆ. ಮಕ್ಕಳ ವಿಚಾರದಲ್ಲಿ ಇದ್ದ ಯೋಚನೆಯು ದೂರವಾಗುತ್ತದೆ. ಕುಟುಂಬದಲ್ಲಿ ಧಾರ್ಮಿಕ ಕಾರ್ಯವೊಂದನ್ನು ನಡೆಸಿಕೊಡುವಿರಿ.

ಪರಿಹಾರ: ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 11

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಹಳದಿ ಬಣ್ಣ

ಕುಂಭ ರಾಶಿ
ಗೃಹಿಣಿಯರು ತಮ್ಮ ಆರೋಗ್ಯದ ಬಗ್ಗೆ ಗಮನಹರಿಸಬೇಕು. ಪಾಲುಗಾರಿಕೆ ವ್ಯಾಪಾರವಿದ್ದರೆ ಹಣದ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಕುಟುಂಬ ನಿರ್ವಹಣೆಗಾಗಿ ಹೆಚ್ಚಿನ ಹಣದ ಅವಶ್ಯಕತೆ ಕಂಡುಬರುತ್ತದೆ. ಹಣದ ಕೊರತೆ ಕಂಡು ಬರುವ ಕಾರಣ ಚಿಂತೆಯಿಂದ ಬಳಲುವಿರಿ. ನಿಮ್ಮ ಕಾರ್ಯವೈಖರಿಯನ್ನು ಎಲ್ಲರೂ ಮೆಚ್ಚಿಕೊಳ್ಳುತ್ತಾರೆ. ಪ್ರವಾಸದ ವೇಳೆಯಲ್ಲಿ ಆತ್ಮೀಯರೊಬ್ಬರನ್ನು ಭೇಟಿ ಮಾಡುವಿರಿ. ಆರ್ಥಿಕ ಪ್ರಗತಿಗೆ ಕುಟುಂಬದ ಹಿರಿಯರ ಮಾರ್ಗದರ್ಶನವು ಬಲು ಮುಖ್ಯವಾಗುತ್ತದೆ. ದಾಂಪತ್ಯದಲ್ಲಿ ಪರಸ್ಪರ ಪ್ರೀತಿ ವಿಶ್ವಾಸಗಳು ಇರಲಿವೆ.

ಪರಿಹಾರ: ತಲೆಗೆ ಹಾಲಲ್ಲಿಟ್ಟು ಸ್ನಾನ ಮಾಡಿದ ನಂತರ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 2
ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಹಸಿರು

ಮೀನ ರಾಶಿ
ಕೆಲಸ ಕಾರ್ಯದಲ್ಲಿ ಗೆಲ್ಲುವ ಹಠ ನಿಮ್ಮಲ್ಲಿರುತ್ತದೆ. ಕೆಲಸ ಕಾರ್ಯಗಳನ್ನು ಆರಂಭಿಸಿದ ಮೇಲೆ ಕಷ್ಟವೆನಿಸಿದರು ಪೂರ್ಣಗೊಳಿಸುವಿರಿ. ಸಾಧನೆ ಮಾಡುವ ವೇಳೆ ಎಚ್ಚರಿಕೆಯಿಂದ ಇರಿ. ಮಕ್ಕಳಿಗೆ ನಿಮ್ಮ ಸಹಾಯ, ಸಹಕಾರ ಮುಖ್ಯವಾಗುತ್ತದೆ. ನಿಮ್ಮ ಮಕ್ಕಳಿಗೆ ಸಂಗೀತ ನಾಟ್ಯದಲ್ಲಿ ಆಸಕ್ತಿ ಮೂಡುತ್ತದೆ. ಮನದಲ್ಲಿ ಅನಾವಶ್ಯಕ ಚಿಂತೆ ಇರುತ್ತದೆ. ನೆರೆಹೊರೆಯವರ ಜೊತೆಯಲ್ಲಿ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುವಿರಿ. ಅನಿವಾರ್ಯವಾಗಿ ಉದ್ಯೋಗವನ್ನು ಬದಲಿಸುವಿರಿ. ಕುಟುಂಬದ ಸದಸ್ಯರ ಜೊತೆಯಲ್ಲಿ ಮನದ ಸಂತಸವನ್ನು ಹಂಚಿಕೊಳ್ಳುವಿರಿ.

ಪರಿಹಾರ: ಹಣೆಯಲ್ಲಿ ತಿಲಕವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 5

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ನೀಲಿ ಬಣ್ಣ

ಸಂಬಂಧಿತ ಸುದ್ದಿ

ಪಂಚಾಂಗ
ನಿತ್ಯ-ಭವಿಷ್ಯ
ಹವಾಮಾನ
ಬಂಗಾರದ ದರಪಟ್ಟಿ

ಸಮಾಜಿಕ

0FansLike
0FollowersFollow
0SubscribersSubscribe
- Advertisement -spot_img

ಜನಪ್ರಿಯ ಲೇಖನಗಳು