ಉಡುಪಿ: ಉಡುಪಿ ಜಿಲ್ಲಾದ್ಯಂತ ಶುಕ್ರವಾರ ತಡರಾತ್ರಿ, ಶನಿವಾರ ಮುಂಜಾನೆವರೆಗೂ ಧಾರಾಕಾರ ಮಳೆಯಾಗಿದೆ.
ಉಡುಪಿ ಸುತ್ತಮುತ್ತಲಿನ ಪರಿಸರದಲ್ಲಿ ಗುಡುಗು ಸಿಡಿಲು ಸಹಿತ ನಿರಂತರ ಧಾರಾಕಾರ ಮಳೆಯಾಗಿದ್ದು, ಗುಡುಗು, ಸಿಡಿಲು ಶಬ್ಧಕ್ಕೆ ಜನರು ಬೆಚ್ಚಿಬಿದ್ದಿದ್ದಾರೆ. ಹಲವೆಡೆ ಹಾನಿ ಸಂಭವಿಸಿದ್ದು, ರಾತ್ರಿವಿಡೀ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಲಾಗಿತ್ತು.
ನಿರಂತರ ಮಳೆಯಿಂದಾಗಿ ಹಲವೆಡೆ ಕೃತಕ ನೆರೆ ಸಂಭವಿಸಿದ್ದು, ತಗ್ಗು ಪ್ರದೇಶ, ಕೃಷಿ ಭೂಮಿ ಮಳೆ ನೀರಿನಿಂದ ಆವೃತವಾಗಿತ್ತು. ಶನಿವಾರ ಮುಂಜಾನೆ ಮಳೆ ಪ್ರಮಾಣ ತಗ್ಗಿದೆ.