spot_img

ಡಾ ಟಿ ಎಂ ಎ ಪೈ ರೋಟರಿ ಆಸ್ಪತ್ರೆ ಕಾರ್ಕಳದಲ್ಲಿ ಉಚಿತ ಹರ್ನಿಯ, ಪಿತ್ತಕೋಶ ಮತ್ತು ಸ್ತನ ಆರೋಗ್ಯ ತಪಾಸಣಾ ಶಿಬಿರ

ರಿಯಾಯಿತಿ ದರದಲ್ಲಿ ಸಂಬಂಧಿತ ಪರೀಕ್ಷೆಗಳು ಮತ್ತು ಶಸ್ತ್ರಚಿಕಿತ್ಸೆ

ಕಾರ್ಕಳ 28 ಮೇ 2024: ಕಾರ್ಕಳದ ಡಾ ಟಿ ಎಂ ಎ ಪೈ ರೋಟರಿ ಆಸ್ಪತ್ರೆಯಲ್ಲಿ ಶುಕ್ರವಾರ , ಮೇ 31, 2024ರಂದು ಹರ್ನಿಯ, ಪಿತ್ತಕೋಶ ಮತ್ತು ಸ್ತನ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಶಿಬಿರವು ಬೆಳಿಗ್ಗೆ ಗಂಟೆ 9:30ರಿಂದ ಸಂಜೆ ಗಂಟೆ 05:00ರವರೆಗೆ ಕಾರ್ಕಳದ ಡಾ ಟಿ ಎಂ ಎ ಪೈ ರೋಟರಿ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಓ ಪಿ ಡಿ ಯಲ್ಲಿ ನಡೆಯಲಿದೆ ಎಂದು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ ಕೀರ್ತಿನಾಥ ಬಲ್ಲಾಳ ಅವರು ತಿಳಿಸಿದ್ದಾರೆ.

ಶಿಬಿರದಲ್ಲಿ ಹರ್ನಿಯಾ ರೋಗನಿರ್ಣಯ ಮತ್ತು ಚಿಕಿತ್ಸೆ ಮಾಡುವುದರ ಜೊತೆಗೆ ಆಗಾಗ ಹೊಟ್ಟೆನೋವು, ವಾಂತಿ, ಪೀತ್ತಕೋಶದ ಸಮಸ್ಯೆಗಳು, ದೇಹದ ವಿವಿಧ ಬಾಗಗಳಲ್ಲಿ ಕಂಡುಬರುವ ಗೆಡ್ಡೆ, ಸ್ತನ ಗೆಡ್ಡೆ ಅಥವ ಸ್ತನ ಉಂಡೆ ಉಳ್ಳವರು ಶಿಬಿರದಲ್ಲಿ ಭಾಗವಹಿಸಬಹುದೆಂದು ಖ್ಯಾತ ಶಸ್ತ್ರ ಚಿಕಿತ್ಸಕ ಡಾ ಮೃಣಾಲ್ ಕುಮಾರ್ ಅವರು ತಿಳಿಸಿದ್ದಾರೆ. ತಜ್ಞ ವೈದ್ಯರ ಸಮಾಲೋಚನೆಯು ಉಚಿತವಾಗಿದ್ದು, ಅಗತ್ಯ ವುಳ್ಳವರಿಗೆ ರಕ್ತ ಪರೀಕ್ಷೆ, ಅಲ್ಟ್ರಾಸೌಂಡ್ ಸ್ಕ್ಯಾನ್ ಮತ್ತು ಶಸ್ತ್ರಚಿಕಿತ್ಸೆಯನ್ನು ರಿಯಾಯಿತಿ ದರದಲ್ಲಿ ಮಾಡಲಾಗುವುದು. ಮೊದಲು ನೋಂದಾಯಿಸಿದ 50 ಜನರಿಗೆ ಮಾತ್ರ ಅವಕಾಶ. ಹೆಚ್ಚಿನ ಮಾಹಿತಿ ಮತ್ತು ನೋಂದಾವಣೆಗೆ ದೂರವಾಣಿ ಸಂಖ್ಯೆ: 9731601150 ಅಥವಾ 08258 230583. ಸಂಪರ್ಕಿಸಲು ಕೋರಲಾಗಿದೆ.

ಸಂಬಂಧಿತ ಸುದ್ದಿ

ಪಂಚಾಂಗ
ನಿತ್ಯ-ಭವಿಷ್ಯ
ಹವಾಮಾನ
ಬಂಗಾರದ ದರಪಟ್ಟಿ

ಸಮಾಜಿಕ

0FansLike
0FollowersFollow
0SubscribersSubscribe
- Advertisement -spot_img

ಜನಪ್ರಿಯ ಲೇಖನಗಳು