ಉಡುಪಿ: ಮತ ಎಣಿಕೆ ಪ್ರಗತಿಯಲ್ಲಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಭಾರೀ ಮುನ್ನಡೆ ಸಾಧಿಸಿದ್ದಾರೆ. ಸುಮಾರು 63,000ಕ್ಕೂ ಹೆಚ್ಚು ಮತಗಳ ಅಂತರದಿಂದ ಕೋಟ ಶ್ರೀನಿವಾಸ ಪೂಜಾರಿ ಮುನ್ನಡೆ ಕಾದಿದ್ದಾರೆ. ಕಾಂಗ್ರೆಸ್ ನ ಜಯಪ್ರಕಾಶ್ ಹೆಗ್ಡೆ ಹಿನ್ನಡೆ ಸಾಧಿಸಿದ್ದಾರೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹಿನ್ನಡೆ ಸಾಧಿಸಿದ್ದಾರೆ.
ಇದೀಗ ರಾಷ್ಟ್ರಮಟ್ಟದಲ್ಲಿ ಎನ್ ಡಿಎ 303 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇಂಡಿಯಾ ಮೈತ್ರಿಕೂಟ 219 ಸೀಟುಗಳಲ್ಲಿ ಮುನ್ನಡೆ ಸಾಧಿಸಿದೆ.