ಉಡುಪಿ : ಬಿಜೆಪಿ ಮಹಿಳಾ ಮೋರ್ಚಾ ಉಡುಪಿ ವಿಧಾನ ಸಭಾ ಕ್ಷೇತ್ರ ವ್ತಾಪ್ತಿಯ ನಾರಿ ಶಕ್ತಿ ಸಮಾವೇಶವು ಉಪ್ಪೂರು ರಾಮ ಕ್ಷತ್ರಿಯ ಸಭಾ ಭವನದಲ್ಲಿ ನಡೆಯಿತು.
ಸಮಾವೇಶದ ಅಧ್ಯಕ್ಷತೆಯನ್ನು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಕೇoದ್ರ ಸಚಿವೆ ಹಾಗೂ ರಾಷ್ಟ್ರೀಯ ವಕ್ತಾರೆ ಮೀನಾಕ್ಷಿ ಲೇಖಿ, ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಸಮಾವೇಶವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ಕುಂದಾಪುರ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಮಾಜಿ ಅಧ್ಯಕ್ಷೆ ಶೀಲಾ ಶೆಟ್ಟಿ, ಚುನಾವಣಾ ಅಭಿಯಾನ ಪ್ರಮುಖ್ ಸುಪ್ರಸಾದ್ ಶೆಟ್ಟಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ಜಿಲ್ಲಾ ಮಹಿಳಾ ಮೋರ್ಚಾ ಪ್ರಭಾರಿ ಕಿರಣ್ ಕುಮಾರ್ ಬೈಲೂರು, ಚುನಾವಣಾ ಪ್ರಭಾರಿ ಶ್ಯಾಮಲಾ ಎಸ್. ಕುಂದರ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು.
ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ದಿನಕರ ಬಾಬು, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಮುಖಂಡರಾದ ಬಿ.ಎನ್. ಶಂಕರ ಪೂಜಾರಿ, ಧನಂಜಯ ಅಮೀನ್, ಚುನಾವಣಾ ಪ್ರಭಾರಿ ರಾಜೇಶ್ ಕಾವೇರಿ, ಮಹಿಳಾ ಮೋರ್ಚಾ ನಿಕಟಪೂರ್ವ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಉಡುಪಿ ಗ್ರಾಮಾoತರ ನಿಕಟಪೂರ್ವ ಅಧ್ಯಕ್ಷೆ ವೀಣಾ ನಾಯ್ಕ್, ಜಿಲ್ಲಾ ವಕ್ತಾರ ವಿಜಯ ಕುಮಾರ್ ಉದ್ಯಾವರ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ನಳಿನಿ ಪ್ರದೀಪ್ ರಾವ್, ಅನಿತಾ ಮರವಂತೆ, ಜಿಲ್ಲಾ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್. ನಾರಾಯಣ, ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಉಡುಪಿ ಗ್ರಾಮಾoತರ ಅಧ್ಯಕ್ಷ ರಾಜು ಕುಲಾಲ್, ಉಪ್ಪೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಗಾಯತ್ರಿ, ಪ್ರಮುಖರಾದ ಸರೋಜ ಶೆಣೈ, ಶಾಂತಿ ಮನೋಜ್, ಜ್ಯೋತಿ ಶೆಟ್ಟಿ, ಸಚಿನ್ ಪೂಜಾರಿ, ಮನೋಜ್ ಶೆಟ್ಟಿ ಹಾಗೂ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಮಹಿಳಾ ಕಾರ್ಯಕರ್ತರು ಬೃಹತ್ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ ಆರ್. ಶೆಟ್ಟಿ ಸ್ವಾಗತಿಸಿದರು. ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಿ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಉಡುಪಿ ಗ್ರಾಮಾoತರ ಮಹಿಳಾ ಮೋರ್ಚಾ ಅಧ್ಯಕ್ಷೆ ರಮ್ಯಾ ರಾವ್ ಉಪ್ಪೂರು ವಂದಿಸಿದರು.