ಕಾರ್ಕಳ : ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ.
ವಿಶ್ವದಾದ್ಯಂತ ಕೋವಿಡ್ -19 ಲಸಿಕೆ ಹಿಂಪಡೆದ ಅಸ್ಟ್ರಾಜೆನೆಕಾ
ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆಯ ಕಾಜೆ ಎಂಬ ಪ್ರದೇಶದಲ್ಲಿ ಈ ಘಟಕವಿದ್ದು, ಕಾರ್ಮಿಕರು ಕೆಲಸ ಮಾಡುತ್ತಿರುವಾಗ ಆಕಸ್ಮಿಕವಾಗಿ ಸ್ಫೋಟ ಸಂಭವಿಸಿದೆ.
ಗಾಯಗೊಂಡ ಮಹಿಳೆಯರನ್ನು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಒಂದೇ ಕಡೆ ಮೂರು ಪ್ರತ್ಯೇಕ ಕಟ್ಟಡಗಳಲ್ಲಿ ಕಳೆದ ಕೆಲವು ವರ್ಷಗಳಿಂದ ಸಿಡಿಮದ್ದು ತಯಾರಿಸಲಾಗುತ್ತಿತ್ತು. ಒಂದು ಕಟ್ಟಡದಲ್ಲಿ ಬುಧವಾರ (ಮೇ 08) ಆಕಸ್ಮಿಕವಾಗಿ ಸ್ಫೋಟ ಸಂಭವಿಸಿ ಮಹಿಳೆಯರಿಬ್ಬರು ಗಾಯಗೊಂಡಿದ್ದಾರೆ.
ಸ್ಫೋಟದ ತೀವ್ರತೆಗೆ ಹೆಂಚಿನ ಕಟ್ಟಡದ ಮೇಲ್ಛಾವಣಿ ಹೊತ್ತಿ ಉರಿದು ಸಂಪೂರ್ಣ ಹಾನಿಯಾಗಿದೆ. ಕಾರ್ಕಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.