ಉಡುಪಿ : ಎಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರಿನರಿ ಸೇರಿದಂತೆ ಹಲವು ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ನಿರ್ಣಾಯಕವಾದ ಸಾಮಾನ್ಯ ಪ್ರವೇಶ ಪರೀಕ್ಷೆ (CET Exam) ರಾಜ್ಯಾದ್ಯಂತ ಗುರುವಾರದಿಂದ ಪ್ರಾರಂಭವಾಗಲಿದೆ.
ಒಟ್ಟು 737 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಈ ಬಾರಿ 3,49,637 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲಿದ್ದಾರೆ. ಈ ಕುರಿತು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಅವರು ಮಾಹಿತಿ ನೀಡಿದ್ದಾರೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮಕ್ಕೆ ಅವಕಾಶವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಬಿಗಿಭದ್ರತೆಯ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ. ಸಿಇಟಿ ಕರ್ತವ್ಯಕ್ಕೆ ಒಟ್ಟಾರೆ 20,300 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದರು.