spot_img

ಹಸೆಮಣೆ ಏರುವ ಮುನ್ನ ಮದುಮಗಳಿಂದ ಮೊದಲ ಮತದಾನ

ಚಿಕ್ಕಮಗಳೂರು: ಹಸೆಮಣೆ ಏರುವ ಮುನ್ನ ಮದುಮಗಳಾಗಿ ಅಲಂಕಾರಗೊಂಡು ಯುವತಿ ತನ್ನ ಬೂತ್‌ನಲ್ಲಿ ಮೊದಲ ಮತದಾನ ಮಾಡಿ ಮದುವೆಗೆ ತೆರಳಿರುವ ಘಟನೆ ಚಿಕ್ಕಮಗಳೂರು  ಜಿಲ್ಲೆಯ ಮೂಡಿಗೆರೆ ತಾಲೂಕಿನ ಕುಂದೂರು ಗ್ರಾಮದಲ್ಲಿ ನಡೆದಿದೆ.

ಕುಂದೂರು ಸಮೀಪದ ತಳವಾರ ಗ್ರಾಮದ ಸುಮಿಕ್ಷಾ ಎಂಬ ಯುವತಿಯ ಮದುವೆ (Marriage) ಕೊಪ್ಪ ಮೂಲದ ಸಂಜಯ್ ಎಂಬವರೊಂದಿಗೆ ನಿಶ್ಚಯವಾಗಿತ್ತು. ಇಂದೇ ಮದುವೆ ನಿಗದಿಯಾಗಿದ್ದ ಕಾರಣ ಮದುವೆ ಮಂಟಪಕ್ಕೆ ತೆರಳುವ ಮುನ್ನ ಮದುಮಗಳಾಗಿ ಅಲಂಕಾರಗೊಂಡ ಯುವತಿ ಮೊದಲ ಮತದಾನ ಮಾಡಿ ಬಳಿಕ ಮದುವೆ ಮಂಟಪಕ್ಕೆ ತೆರಳಿದ್ದಾರೆ. ಮೂಡಿಗೆರೆ ಪಟ್ಟಣದ ಪ್ರೀತಂ ಹಾಲ್‌ನಲ್ಲಿ ಮದುವೆ ನಡೆಯಲಿದೆ.

ಸಂಬಂಧಿತ ಸುದ್ದಿ

ಪಂಚಾಂಗ
ನಿತ್ಯ-ಭವಿಷ್ಯ
ಹವಾಮಾನ
ಬಂಗಾರದ ದರಪಟ್ಟಿ

ಸಮಾಜಿಕ

0FansLike
0FollowersFollow
0SubscribersSubscribe
- Advertisement -spot_img

ಜನಪ್ರಿಯ ಲೇಖನಗಳು