spot_img

ಹೆಬ್ರಿ: ದೊಣ್ಣೆಯಿಂದ ಹೊಡೆದು ಅಣ್ಣನನ್ನು ಕೊಲೆಗೈದ ತಮ್ಮ- ಆರೋಪಿ ಬಂಧನ

ಹೆಬ್ರಿ: ಅಣ್ಣನನ್ನೇ ತಮ್ಮ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಾಲ್ಕೂರು ಗ್ರಾಮದ ಕಜ್ಕೆ ಅರಮನೆ ಜೆಡ್ಡು ಎಂಬಲ್ಲಿ ಸಂಭವಿಸಿದೆ.ನಾಲ್ಕೂರು ಗ್ರಾಮದ ಕಜ್ಕೆ ಅರಮನೆಜೆಡ್ಡು ನಿವಾಸಿ ಮಂಜುನಾಥ (35) ಮೃತಪಟ್ಟವರು. ಕೊಲೆ ಆರೋಪಿ ವಿಶ್ವನಾಥ(30)ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕೂಲಿ ಕೆಲಸ ಮಾಡಿಕೊಂಡಿದ್ದ ಮಂಜುನಾಥ ಮತ್ತು ವಿಶ್ವನಾಥ ಒಂದೇ ಮನೆಯಲ್ಲಿ ವಾಸವಾಗಿದ್ದು, ಇವರಿಬ್ಬರು ಆಗಾಗ ಗಲಾಟೆ ಮಾಡುತ್ತಿದ್ದರು. ಮಧ್ಯರಾತ್ರಿ ವೇಳೆ ಮದ್ಯ ಸೇವಿಸಿ ಬಂದು ಮಂಜುನಾಥ, ತನ್ನ ತಮ್ಮ ವಿಶ್ವನಾಥನನ್ನು ಉದ್ದೇಶಿಸಿ, ನನ್ನ ಪತ್ನಿ ಮನೆ ಬಿಟ್ಟು ಹೋಗಲು ನೀನೇ ಕಾರಣವೆಂದು ಹೇಳಿದ್ದ. ಇದೇ ವಿಚಾರದಲ್ಲಿ ವಿಶ್ವನಾಥ ಕೋಪಗೊಂಡು ಛಾವಣಿಯಲ್ಲಿದ್ದ ದೊಣ್ಣೆಯಿಂದ ಮಂಜುನಾಥ ಅವರ ತಲೆಗೆ ಬಲವಾಗಿ ಹೊಡೆದಿದ್ದ. ಪರಿಣಾಮ ತೀವ್ರ ರಕ್ತ ಹರಿದು ಮಂಜುನಾಥ ಸ್ಥಳದಲ್ಲಿಯೇ ಮೃತಪಟ್ಟಿರುವುದಾಗಿ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿತ ಸುದ್ದಿ

ಪಂಚಾಂಗ
ನಿತ್ಯ-ಭವಿಷ್ಯ
ಹವಾಮಾನ
ಬಂಗಾರದ ದರಪಟ್ಟಿ

ಸಮಾಜಿಕ

0FansLike
0FollowersFollow
0SubscribersSubscribe
- Advertisement -spot_img

ಜನಪ್ರಿಯ ಲೇಖನಗಳು