ಮೇಷ :
ಉದ್ಯೋಗದಲ್ಲಿನ ಬದಲಾವಣೆಗಳಿಗೆ ಹೊಂದಿಕೊಳ್ಳಬೇಕಾಗುತ್ತದೆ. ಸಮಾಜದಲ್ಲಿ ಉನ್ನತ ಸ್ಥಾನ ಗಳಿಸಲು ಪ್ರಯತ್ನಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿನ ಆದಾಯ ಕುಂಠಿತಗೊಳ್ಳಲಿದೆ. ಪಾಲುಗಾರಿಕೆ ವ್ಯಾಪಾರವಾದಲ್ಲಿ ನಷ್ಟವಾಗದು. ವಿದ್ಯಾರ್ಥಿಗಳು ಕಲಿಕೆಯಲ್ಲಿ ಪ್ರೌಢಿಮೆ ಸಾಧಿಸಲಿದ್ದಾರೆ. ಬೇಸರದಿಂದ ದೂರವಾಗಲು ಮನರಂಜನಾ ಸ್ಥಳಕ್ಕೆ ಭೇಟಿ ನೀಡುವಿರಿ.
ಪರಿಹಾರ : ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 4
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಕಪ್ಪು ಬಣ್ಣ
ವೃಷಭ :
ವಿದ್ಯಾರ್ಥಿಗಳು ಸಹಪಾಠಿಗಳ ಜೊತೆಗೂಡಿ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಸ್ವಂತ ನಿರ್ಧಾರಗಳನ್ನು ಎಲ್ಲರೊಂದಿಗೆ ಕಾರ್ಯಗತಗೊಳಿಸುವಿರಿ. ಯಾವುದೇ ರೀತಿಯ ಅನುಮಾನ ಉಂಟಾದಲ್ಲಿ ಆತ್ಮೀಯರ ಸಲಹೆ ಸೂಚನೆಗಳನ್ನು ಪಾಲಿಸುವಿರಿ. ಪ್ರಯಾಣಿಸುವ ವೇಳೆಯಲ್ಲಿ ಎಚ್ಚರಿಕೆಯ ಅಗತ್ಯವಿದೆ. ವಿವಾಹದ ಮಾತುಕತೆ ನಡೆಯಲಿದೆ. ಪಾಲುಗಾರಿಕೆಯ ವ್ಯಾಪಾರದಲ್ಲಿ ಉತ್ತಮ ಆದಾಯ ದೊರೆಯುತ್ತದೆ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು ಉತ್ತರ
ಅದೃಷ್ಟದ ಬಣ್ಣ : ತಿಳಿ ಹಸಿರು
ಮಿಥುನ
ಖರ್ಚಿನಲ್ಲಿ ಹಿಡಿತ ಇರುವ ಕಾರಣ ಹಣದ ತೊಂದರೆ ಉಂಟಾಗುವುದಿಲ್ಲ. ಕುಟುಂಬದ ಸದಸ್ಯರ ಮನದಾಳವನ್ನು ಅರಿತು ನಡೆಯುವಿರಿ. ಕೌಟುಂಬಿಕ ವಿಚಾರಗಳಲ್ಲಿ ನಿಮ್ಮದೇ ಅಂತಿಮ ತೀರ್ಮಾನ ಆಗಲಿದೆ. ಉದ್ಯೋಗದಲ್ಲಿ ಬಯಸಿದ ಅನುಕೂಲತೆಗಳು ಲಭ್ಯವಾಗುತ್ತದೆ. ವೈವಾಹಿಕ ಜೀವನ ಸುಖಮಯವಾಗಿರುತ್ತದೆ. ತಂದೆ ತಾಯಿಗಳ ಸಹಾಯ ದೊರೆಯುತ್ತದೆ. ಕಷ್ಟಪಟ್ಟು ಓದುವ ಕಾರಣ ವಿದ್ಯಾರ್ಥಿಗಳು ವಿಶೇಷ ಸಾಧನೆ ಮಾಡುತ್ತಾರೆ. ಹಣದ ಉಳಿತಾಯಕ್ಕಾಗಿ ಹಲವು ಯೋಜನೆಯಲ್ಲಿ ಹಣ ವಿನಿಯೋಗಿಸುವಿರಿ.
ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 10
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ನಸುಗೆಂಪು ಬಣ್ಣ
ಕಟಕ
ಉದ್ಯೋಗದಲ್ಲಿ ಆತುರದ ನಿರ್ಧಾರ ಕೈಗೊಳ್ಳದಿರಿ. ಉದ್ಯೋಗದಲ್ಲಿನ ಬದಲಾವಣೆಗಳು ನಿಮ್ಮ ಪರವಾಗಿರುತ್ತದೆ. ಉದ್ಯೋಗವನ್ನು ಬದಲಿಸುವ ಸಾದ್ಯತೆ ಇದೆ. ವ್ಯಾಪಾರ ವ್ಯವಹಾರಗಳಲ್ಲಿ ನಷ್ಟವಾಗದು. ಮೊದಲು ಸ್ವಂತ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ವಿದ್ಯಾರ್ಥಿಗಳು ಚುರುಕುತನದಿಂದ ಆಟ ಪಾಠಗಳಲ್ಲಿ ಮುಂದಿರುತ್ತಾರೆ. ಆರೋಗ್ಯದ ಬಗ್ಗೆ ಗಮನ ನೀಡಿ. ಕುಟುಂಬದಲ್ಲಿನ ಹಣಕಾಸಿನ ವಿವಾದ ಬಗೆಹರಿಯಲಿದೆ.
ಪರಿಹಾರ : ಬೆಳ್ಳಿಯ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ
ಸಿಂಹ
ಉದ್ಯೋಗಕ್ಕೆ ಸಂಬಂಧಿಸಿದ ವಿಚಾರಗಳ ಹೆಚ್ಚಿನ ಅಧ್ಯಯನಕ್ಕೆ ವಿದೇಶಕ್ಕೆ ತೆರಳುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಹೇರಳ ಲಾಭವಿರುತ್ತದೆ. ವಿದ್ಯಾರ್ಥಿಗಳ ಆತ್ಮವಿಶ್ವಾಸ ಉತ್ತಮ ಫಲಿತಾಂಶ ನೀಡುತ್ತದೆ. ಸೋದರ ಅಥವಾ ಸೋದರಿ ಯಿಂದ ಉಡುಗೊರೆ ದೊರೆಯಲಿದೆ. ಆಹಾರಕ್ಕೆ ಸಂಬಂಧಿಸಿದ ವ್ಯಾಪಾರವನ್ನು ಆರಂಭಿಸುವಿರಿ. ಹಿರಿಯರ ಮನ ನೋಯಿಸುವ ಕೆಲಸವನ್ನು ಮಾಡುವುದಿಲ್ಲ.
ಪರಿಹಾರ : ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹೊಸ ಉಡುಗೆ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 4
ಅದೃಷ್ಟದ ದಿಕ್ಕು ದಕ್ಷಿಣ
ಅದೃಷ್ಟದ ಬಣ್ಣ : ಹಾಲಿನ ಬಣ್ಣ
ಕನ್ಯಾ
ದುಡಿದು ಬೇಸತ್ತ ಕಾರಣ ವಿಶ್ರಾಂತಿ ಪಡೆಯಲು ಪರಸ್ಠಳಕ್ಕೆ ತೆರಳುವಿರಿ. ಆತ್ಮ ವಿಶ್ವಾಸವನ್ನು ಬೆಳೆಸಿಕೊಳ್ಳಲು ಧ್ಯಾನದ ಮಾರ್ಗ ಅನುಸರಿಸುವಿರಿ. ತಂದೆಯವರ ಅನಾವಶ್ಯಕ ಖರ್ಚು ವೆಚ್ಚಗಳ ಖಡಿತಗೊಳಿಸುವಿರಿ. ಉದ್ಯೋಗದಲ್ಲಿ ತೊಂದರೆ ಇರುವುದಿಲ್ಲ. ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷಿತ ಲಾಭ ಗಳಿಸುವಿರಿ. ವಿದ್ಯಾರ್ಥಿಗಳು ಸ್ಥಿರವಾದ ಮನಸ್ಸಿನಿಂದ ಕಲಿಕೆಯಲ್ಲಿ ತೊಡಗುತ್ತಾರೆ. ಗೃಹಾಲಂಕಾರ ಪದಾರ್ಥಗಳಿಗೆ ಹೆಚ್ಚಿನ ಹಣವನ್ನು ವಿನಿಯೋಗಿಸುವಿರಿ.
ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 11
ಅದೃಷ್ಟದ ದಿಕ್ಕು ನೈರುತ್ಯ
ಅದೃಷ್ಟದ ಬಣ್ಣ: ಬೂದು ಬಣ್ಣ
ತುಲಾ
ಉದ್ಯೋಗದಲ್ಲಿ ಸಹೋದ್ಯೋಗಿಗಳ ಪ್ರೀತಿ ವಿಶ್ವಾಸ ಸಂಪಾದಿಸಿದರೆ ಯಾವುದೇ ಅಡೆ ತಡೆಗಳು ಎದುರಾಗುವುದಿಲ್ಲ. ವ್ಯಾಪಾರ ವ್ಯವಹಾರಗಳು ಆತಂಕದ ನಡುವೆಯೂ ಸುಗಮವಾಗಿ ನಡೆಯಲಿದೆ. ವಿದ್ಯಾರ್ಥಿಗಳಿಗೆ ಉತ್ತಮ ಸಹಕಾರ ನೀಡಬೇಕು. ಅವಿವಾಹಿತರಿಗೆ ವಿವಾಹ ಯೋಗವಿದೆ. ಬಹುದಿನಗಳ ನಂತರ ಸರ್ಕಾರಕ್ಕೆ ಸಂಬಂಧಿಸಿದ ಕೆಲಸ ಒಂದು ಯಶಸ್ವಿಯಾಗಲಿದೆ. ಹಣ ಉಳಿತಾಯದ ಬಗ್ಗೆ ಯೋಚನೆ ಮಾಡುವಿರಿ.
ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 6
ಅದೃಷ್ಟದ ದಿಕ್ಕು ಪಶ್ಚಿಮ
ಅದೃಷ್ಟದ ಬಣ್ಣ: ಕೆಂಪು
ವೃಶ್ಚಿಕ
ಕುಟುಂಬದಲ್ಲಿನ ನಿರ್ಧಾರಗಳನ್ನು ಬದಲಾಯಿಸದಿರಿ. ಉದ್ಯೋಗದಲ್ಲಿ ಆತಂಕದ ಪರಿಸ್ಥಿತಿ ಎದುರಾದರೂ ತೊಂದರೆ ಆಗದು. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯ ಪಡೆಯುವಿರಿ. ವಿದ್ಯಾರ್ಥಿಗಳು ಕ್ರೀಡಾ ಮನೋಭಾವನೆಯಿಂದ ಮುಂದುವರೆಯುವರು. ತಂದೆ ಅಥವಾ ತಾಯಿಯ ಆರೋಗ್ಯದಲ್ಲಿ ತೊಂದರೆ ಇರುತ್ತದೆ. ಹಣಕಾಸಿನ ವ್ಯವಹಾರ ಲಾಭಧಾಯಕವಲ್ಲ. ಇರುವ ವಾಹನವನ್ನು ಆತ್ಮೀಯರಿಗೆ ನೀಡಿ ಹೊಸ ವಾಹನ ಕೊಳ್ಳುವಿರಿ.
ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಎಲೆ ಹಸಿರು
ಧನಸ್ಸು
ಕುಟುಂಬದಲ್ಲಿ ಸ್ನೇಹಮಯ ವಾತಾವರಣ ಇರುತ್ತದೆ. ಉದ್ಯೋಗದಲ್ಲಿನ ಅಡ್ಡಿ ಆತಂಕಗಳು ತಾವಾಗಿಯೇ ದೂರವಾಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಬಿಡುವಿಲ್ಲದೆ ಕಾಯ ನಿರ್ವಹಿಸಬೇಕಾಗುತ್ತದೆ. ಹಣದ ತೊಂದರೆ ಎದುರಾಗದು. ವಿದ್ಯಾರ್ಥಿಗಳು ಸಹಪಾಠಿಗಳ ಸ್ನೇಹ ಗಳಿಸಿ ಉನ್ನತ ಸ್ಥಾನ ಗಳಿಸುತ್ತಾರೆ. ಮಕ್ಕಳಿಗೆ ವಿವಾಹ ನಿಶ್ಚಯವಾಗುತ್ತದೆ. ಸಂಬಂಧಿಕರ ಮಾತಿನಿಂದ ಬೇಸರಗೊಂದು ದೂರವಾಗುವಿರಿ.
ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈಕಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 12
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಕೇಸರಿ
ಮಕರ
ಕ್ರಿಯಾಶೀಲತೆಯಿಂದ ಆರಂಭಿಸುವ ಕೆಲಸ ಕಾರ್ಯಗಳಲ್ಲಿ ಯಶಸ್ಸು ಗಳಿಸುವಿರಿ. ಉದ್ಯೋಗದಲ್ಲಿ ಸೇವಾ ಮನೋಭಾವ ಇರುವ ಕಾರಣ ಯಾವುದೇ ತೊಂದರೆ ಎದುರಾಗದು. ಮೇಲಧಿಕಾರಿಗಳ ಪ್ರಶಂಸೆ ದೊರೆಯುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ನಷ್ಟವಾಗದು. ವಿದ್ಯಾರ್ಥಿಗಳಿಗೆ ಶುಭ ಫಲಗಳಿವೆ. ಕುಟುಂಬದ ಆಸ್ತಿಯ ವಿವಾದವು ಪರಿಹಾರ ಗೊಳ್ಳುವುದು. ಪಶು ಸಂಗೋಪನೆಯಲ್ಲಿ ಉತ್ತಮ ಆದಾಯವಿರುತ್ತದೆ.
ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಕಡು ಬಾದಾಮಿ
ಕುಂಭ
ಉದ್ಯೋಗದ ಸಲುವಾಗಿ ವಿದೇಶಕ್ಕೆ ತೆರಳುವಿರಿ. ವ್ಯಾಪಾರ ವ್ಯವಹಾರದಲ್ಲಿ ಯಾವುದೇ ಬದಲಾವಣೆಗಳು ಎದುರಾಗದು. ಹಣಕಾಸಿನ ವಿಚಾರಗಳು ಸ್ವಂತ ಇಚ್ಛೆಗೆ ಅನುಗುಣವಾಗಿ ನಡೆಯಲಿವೆ. ಹಣದ ಕೊರತೆ ಕಂಡು ಬರುತ್ತದೆ. ಸೋದರಿಯ ಸಹಾಯವಿದೆ. ಪಾಲುದಾರಿಕೆಯ ವ್ಯವಹಾರ ಒಂದರಲ್ಲಿ ಉತ್ತಮ ಲಾಭ ಗಳಿಸಿರುವಿರಿ. ಜಗಳ ಕದನವಿಲ್ಲದೆ ಮೌನದಿಂದ ಕೆಲಸ ಸಾಧಿಸುವಿರಿ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ : 6
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಕೆಂಪು
ಮೀನ
ಉದ್ಯೋಗದಲ್ಲಿ ಧನಾತ್ಮಕ ಬದಲಾವಣೆಗಳು ಉಂಟಾಗಲಿವೆ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯ ಲಭಿಸುತ್ತದೆ. ಕೃಷಿಯಲ್ಲಿ ಆಸಕ್ತಿ ಮೂಡುತ್ತದೆ. ವಿಶಾಲವಾದ ವಾಸಸ್ಥಾನಕ್ಕೆ ಸ್ಥಳ ಬದಲಾವಣೆ ಮಾಡುವಿರಿ. ಕುಟುಂಬದ ಸದಸ್ಯರ ಜೊತೆಯಲ್ಲಿ ಯಾತ್ರಾ ಸ್ಥಳಕ್ಕೆ ಭೇಟಿ ನೀಡುವಿರಿ. ಸ್ವಂತ ಬಳಕೆಗಾಗಿ ವಾಹನವನ್ನು ಕೊಳ್ಳುವಿರಿ. ಕುಟುಂಬದಲ್ಲಿ ಧಾರ್ಮಿಕ ಕಾರ್ಯವೊಂದನ್ನು ಆಯೋಜಿಸುವಿರಿ. ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ತೋರುವಿರಿ.
ಪರಿಹಾರ : ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ : 1
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ : ಕಿತ್ತಳೆ ಬಣ್ಣ