ಕೋಲ್ಲೂರು ಮೇ 11: ಯುವತಿಯೊಬ್ಬಳ ಮೇಲೆ ಅತ್ಯಾಚಾರಾ ಮಾಡಿದ್ದಲ್ಲದೆ ಆರೋಪಿಯ ಜೊತೆಗಿದ್ದ ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಆರೋಪಿಯನ್ನು ಕೊಲ್ಲೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತ ಆರೋಪಿಯನ್ನು ಉಡುಪಿ ಸಮೀಪದ ನಿವಾಸಿ ಮಂಜುನಾಥ (24) ಎಂದು ಗುರುತಿಸಲಾಗಿದೆ.
ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯ 24 ವರ್ಷದ ಯುವತಿ ನೀಡಿದ ದೂರಿನಡಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಯು ಯುವತಿಯೊಂದಿಗಿದ್ದ ಪೋಟೋಗಳನ್ನು ಸಾಮಾಜಿಕ ಜಾಲತಣಾದಲ್ಲಿ ಹರಿ ಬಿಟ್ಟ ಬಗ್ಗೆಯೂ ನೊಂದ ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ.