ಉಡುಪಿ: ಅತಿ ವೇಗದಲ್ಲಿ ಸಾಗುತ್ತಿದ್ದ ಇನೋವಾ ಕಾರು ಪಲ್ಟಿಯಾಗಿ ಯುವತಿಯೊಬ್ಬಳು ಮೃತಪಟ್ಟ (Car Accident) ಘಟನೆ ನಡೆದಿದೆ. ಕುಂದಾಪುರ ಸಮೀಪದ ಹುಣ್ಸೆಮಕ್ಕಿ ಬಳಿಯ ಗುಡ್ಡೆಯಂಗಡಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಚೆನ್ನಪಟ್ಟಣ ಮೂಲದ ಯುವತಿ ಕೀರ್ತಿ ಎಂಬುವರು ಅಪಘಾತದಲ್ಲಿ ಮೃತಪಟ್ಟವರು.
ಚೆನ್ನಪಟ್ಟಣ ಮೂಲದ ಅವರು ಧರ್ಮಸ್ಥಳಕ್ಕೆ ಬಂದಿದ್ದರು. ಅಲ್ಲಿಂದ ಅವರು ಮುರುಡೇಶ್ವರಕ್ಕೆ ಹೊರಟಿದ್ದರು. ಅತಿ ವೇಗದಲ್ಲಿ ಸಾಗುತ್ತಿದ್ದ ಕಾರು ಹುಣ್ಸೆಮಕ್ಕಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗೆ ಡಿಕ್ಕಿ ಹೊಡೆದಿದೆ. ಬಳಿಕ ಬಳಿಕ ರಸ್ತೆ ಬದಿಯ ಮರಕ್ಕೂ ಢಿಕ್ಕಿ ಹೊಡೆದು ಇನ್ನೋವಾ ಮಾತು ಪಲ್ಟಿಯಾಗಿದೆ. ಕಾರು ಪಲ್ಟಿಯಾದ ತೀವ್ರತೆಗೆ ಕಾರಿನಲ್ಲಿದ್ದ 5 ಮಂದಿಗೆ ಗಂಭೀರ ಗಾಯಗೊಂಡಿದ್ದಾರೆ. ಅಲ್ಲದೆ ಯುವತಿಯೊಬ್ಬಳು ಮೃತಪಟ್ಟಿದ್ದಾಳೆ. ಕೋಟ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.