“ಉಡುಪಿ, ಎ.2: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಒಟ್ಟು 9 ಮಂದಿ ರೌಡಿಶೇಟರ್‌ಗಳನ್ನು ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.
ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ರಂಜಿತ್ ಯಾನೆ ರಂಜಿತ್ ಕಲ್ಮಾಡಿ, ರೋಹಿತ್, ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಇಕ್ಬಾಲ್ ಶೇಖ್, ಹರೀಶ್ ಪೂಜಾರಿ, ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಅಭಿಷೇಕ್ ಶ್ರೀಯಾನ್, ರಂಜಿತ್ ಪೂಜಾರಿ, ಸೆನ್ ಪೊಲೀಸ್ ಠಾಣೆಯ ರಾಘವೇಂದ್ರ ದೇವಾಡಿಗ, ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮುಹಮ್ಮದ್ ರಶೀದ್, ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಮಹೇಶ್ ಗಾಣಿಗ ಅವರನ್ನು ಜೂ.10ರವರೆಗೆ ಜಿಲ್ಲೆಯಿಂದ ಗಡಿಪಾರು ಮಾಡಿ ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಆದೇಶ ಹೊರಡಿಸಿದ್ದಾರೆ”